ದೀಪಾವಳಿ ಪ್ರಯುಕ್ತ ಹೆಚ್ಚುವರಿ ಬಸ್ !

Kannada News

13-10-2017 397

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ವಿವಿಧ ಸ್ಥಳಗಳಿಗೆ 1300 ರಿಂದ 1500 ಹೆಚ್ಚುವರಿ ಬಸ್‍ ಗಳ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದೇ 17 ರಿಂದ 19ರವರೆಗೆ ವಿಶೇಷ ಬಸ್‍ ಗಳು ಸಂಚರಿಸಲಿವೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಇದೇ 22ರ ವರೆಗೆ ಬಸ್‍ಗಳು ಸಂಚರಿಸಲಿವೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣ ಮತ್ತು ವಿಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಬಸ್‍ಗಳು ಸಂಚರಿಸಲಿವೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ರಾಜ್ಯ ಸಾರಿಗೆ ಸಂಸ್ಥೆಯಿಂದ ತಿಳಿದು ಬಂದಿದೆ.

 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ