ಸೋಲಾರ್ ಪಾರ್ಕ್ ನಲ್ಲಿ ಅನುಮಾನಾಸ್ಪದ ಸಾವು !

Kannada News

13-10-2017

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ, ತಿರುಮಣಿಯಲ್ಲಿರುವ ಸೋಲಾರ್ ಪಾರ್ಕ್‍ನಲ್ಲಿ ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಪಿಕಾಶ್ (40) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ. ತಿರುಮಣಿಯಲ್ಲಿರುವ ಸೋಲಾರ್ ಪಾರ್ಕ್‍ನಲ್ಲಿ ನಿನ್ನೆ ಎಂದಿನಂತೆ ಕೆಲಸ ಮಾಡುತ್ತಿದ್ದ ಕಾರ್ಮಿಕ, ಇಂದು ಬೆಳಿಗ್ಗೆ 8 ಗಂಟೆಯಾದರೂ ಎದ್ದಿಲ್ಲ ಎಂದು, ಜೊತೆಯಲ್ಲಿ ಕೆಲಸ ಮಾಡುತ್ತಿದ್ದವರು ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಕೂಡಲೇ ತಿರುಮಣಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಇನ್ನು ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ