ಪಾರ್ಕ್ ನಲ್ಲಿ ಯುವಕನ ಬರ್ಬರ ಕೊಲೆ !

Kannada News

13-10-2017

ಬೆಂಗಳೂರು: ನಗರದ ಸುಂಕದಕಟ್ಟೆಯ ಕೆರೆ ಅಂಗಳದ ಉದ್ಯಾನವನದಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಯಾದ ಯುವಕ ಸುಮಾರು 25 ವರ್ಷ ವಯಸ್ಸಾಗಿದ್ದು, ಆತನ ಹೆಸರು, ವಿಳಾಸ ತಿಳಿದು ಬಂದಿಲ್ಲ. ಉದ್ಯಾನವನದಲ್ಲಿ ಮಲಗಿದ್ದ ಆತನ ತಲೆಯ ಮೇಲೆ ದುಷ್ಕರ್ಮಿಗಳು ನಿನ್ನೆ ಮಧ್ಯರಾತ್ರಿ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಪಾರ್ಕ್ ನ ಬಳಿ ಮುಂಜಾನೆ ವಾಯುವಿಹಾರಕ್ಕೆ ಹೋದ ಸಾರ್ವಜನಿಕರು, ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿರುವ ಕಾಮಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ