ಕೆಎಸ್ಒಯು ಮತ್ತೆ ಓಪನ್..?

Kannada News

13-10-2017

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮುಚ್ಚದಂತೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಕೆಎಸ್‌ಒಯು ವಿದ್ಯಾರ್ಥಿಗಳು ಹಾಗು ಪ್ರಾಧ್ಯಾಪಕರು ಬಿಜೆಪಿ ನಾಯಕರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಕಚೇರಿ ಎದುರು ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ವಿವಿಯ ಸಿಬ್ಬಂದಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವಿಷಯದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಬೇಕು, ಕೇಂದ್ರ ಸಚಿವರ ಮೂಲಕವೂ ವಿವಿ ಉಳಿವಿಗೆ ಪ್ರಯತ್ನ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದರು.

ಇನ್ನು ಈ ವೇಳೆ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್, ಯಾವುದೇ ಕಾರಣಕ್ಕೂ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ಮುಚ್ಚಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿಲ್ಲ, ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ವಿವಿಯನ್ನು ಪುನರಾರಂಭ ಮಾಡುತ್ತೇವೆ ಎಂದು ಹೇಳಿದರು.

ವಿವಿಯಲ್ಲಿ ಸುಮಾರು 580 ಕೋಟಿ ಹಣ ಅವ್ಯವಹಾರ ನಡೆದಿರುವುದು ಗಮನಕ್ಕೆ ಬಂದಿದೆ, ಈಗಾಗಲೇ ಯುಜಿಸಿ ಕೂಡ ಇದರ ತನಿಖೆಯನ್ನು ನಡೆಸುತ್ತಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಿದ್ದೇವೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ