ವೇಣು ವಾಪಸ್ ಗೆ ಬಿಜೆಪಿ ಆಗ್ರಹ !

Kannada News

13-10-2017

ಬೆಂಗಳೂರು: ಕೇರಳದ ಸೋಲಾರ್ ಹಗರಣ ಪ್ರಕರಣ ಸಂಬಂಧ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆ, ಅವರನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ಮುಂಭಾಗ ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ನಗರದಲ್ಲಿಂದು ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಮಹಿಳಾ ಮೋರ್ಚಾ(ಬೆಂಗಳೂರು)ವತಿಯಿಂದ, ಕೇರಳದಲ್ಲಿ ಲೈಂಗಿಕ ಕಿರುಕುಳ ಹಾಗೂ ಸೋಲಾರ್ ಹಗರಣದಲ್ಲಿ ಭಾಗಿಯಾಗಿದ್ದ ವೇಣುಗೋಪಾಲ್ ಅವರನ್ನು ಕರ್ನಾಟಕದಿಂದ ವಾಪಸ್ಸು ಕಳಿಹಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಹಿಳಾ ಮೋರ್ಚಾ ಕಾರ್ಯಕರ್ತರು ವೇಣುಗೋಪಾಲ್ ತೊಲಗಲಿ ಎಂದು ಭಿತ್ತಿ ಪತ್ರಗಳನ್ನು ಹಿಡಿದುಕೊಂಡು, ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಶೋಭಾ ಕರಂದ್ಲಾಜೆ, ಕೇರಳದಲ್ಲಿ 2003ರಲ್ಲಿ ನಡೆದಿದ್ದ, ಬಹು ಕೋಟಿ ಸೋಲಾರ್ ಹಗರಣದ ವೇಳೆ ಲೈಂಗಿಕ ಕಿರುಕುಳಕ್ಕೆ ಆರೋಪಿ ಸವಿತಾ ನಾಯರ್ ಒಳಗಾಗಿದ್ದರು ಎಂದು ಆರೋಪಿಸಿದರು. ಈ ವೇಳೆ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ, ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಶಾರದಾ ನಾಯಕ್, ರಾಜ್ಯ ಬಿಜೆಪಿ ಮಹಿಳಾಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸುಜಾತಾ ಪಾಟೀಲ್ ಮತ್ತು ಕಾರ್ಯಕರ್ತರು  ಹಾಜರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ