ಮೋದಿ ವಿರುದ್ಧ ಸಿಪಿಐ ಕಿಡಿ

Kannada News

13-10-2017

ಬೆಂಗಳೂರು: ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ, ಸಿಪಿಐ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬಿತ್ತಿಪತ್ರಗಳನ್ನು ಹಂಚಿ ಪ್ರತಿಭಟನೆ ನಡೆಸಿದರು. ಸಿಪಿಐ(ಬೆಂಗಳೂರು ಜಿಲ್ಲಾ ಮಂಡಳಿ)ಯ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜನ ಸಮುದಾಯ ಸಮಸ್ಯೆಗಳಿಗೆ ಸ್ಪಂದಿಸದೆ, ರೈತರ, ಕಾರ್ಮಿಕರ ಹಿತಕ್ಕೆ ಧಕ್ಕೆ ತರುವಂತಹ ಆಡಳಿತ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ ಸಹ ಕಾರ್ಯದರ್ಶಿ ಸ.ಸುಂದರೇಶ್, ಪ್ರಧಾನಿ ಗಾದಿ ಗೇರಿದಾಗಿನಿಂದ ಕೇವಲ ವಿದೇಶ ಪ್ರವಾಸಗಳಿಗೆ ತಮ್ಮ ಸಮಯ ಮೀಸಲಿಡುತ್ತಿರುವ ನರೇಂದ್ರ ಮೋದಿಯವರು ದೇಶದ ರೈತರ, ಕಾರ್ಮಿಕರ ಸಮಸ್ಯೆಗಳ ಕುರಿತು ಗಮನ ಹರಿಸುತ್ತಿಲ್ಲ ಎಂದರು.

ದೇಶದ ವಿವಿಧ ರಾಜ್ಯಗಳಲ್ಲಿ ದಿನನಿತ್ಯ ರೈತರ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದರೂ ಅದನ್ನು ತಡೆಯಲು ಯಾವುದೇ ಕ್ರಮ ಕೈಗೊಳ್ಳದ ಮೋದಿ ಸರ್ಕಾರ, ಕೃಷಿ ಮತ್ತು ರೈತಾಪಿ ವರ್ಗವನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ, ಡಿಜಿಟಲ್ ಇಂಡಿಯಾ, ಸ್ಮಾರ್ಟ್ ಸಿಟಿ ಸ್ಥಾಪನೆ ಎಂಬ ನಗರ ಕೇಂದ್ರೀತ ಮತ್ತು ಕಾರ್ಪೋರೇಟ್ ವಲಯದ ಹಿತ ಕಾಯುವ ಮೂಲ ಧೋರಣೆ ಹೊಂದಿರುವ ಕೇಂದ್ರ ಸರ್ಕಾರ, ಗ್ರಾಮೀಣ ಭಾಗದ ರೈತರ, ಮತ್ತು ಕೈಗಾರಿಕಾ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಮಾರಕ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ಆರೋಪಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ