ಮಳೆ ಅನಾಹುತ: ಮಾಹಿತಿ ಪಡೆದ ಸಿಎಂ !

Kannada News

14-10-2017

ಬೆಂಗಳೂರು: ನಗರದಲ್ಲಿ ರಾತ್ರಿ ಸಂಭವಿಸಿದ ಮಳೆ ಅನಾಹುತದಲ್ಲಿ ಮೃತರಾದವರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.

ಮಳೆ ಅನಾಹುತ ಸಂಬಂಧ, ಸಹ ಆಯುಕ್ತರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ನಗರದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಆದ್ದರಿಂದ ಹೆಚ್ಚಾಗಿ ಅನಾಹುತ ಸಂಭವಿಸುವ ಪ್ರದೇಶಳಿಗೆ ಎಂಜಿನಿಯರುಗಳನ್ನು ಕಳುಹಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಬೆಂಗಳೂರಿನ ಸಚಿವರು, ಶಾಸಕರು, ಪಾಲಿಕೆ ಸದಸ್ಯರು ಆಯಾ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು. ಈ ವೇಳೆ  ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಆಯುಕ್ತ ಮಂಜುನಾಥ ಪ್ರಸಾದ್ ಅವರು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ