ಮನೆಯ ಮೇಲ್ಛಾವಣಿ ಕುಸಿದು 3 ಸಾವು !

Kannada News

16-10-2017

ಗದಗ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಸಾವು-ನೋವು ಮತ್ತು ಅನೇಕ ಕಡೆಗಳಲ್ಲಿ ಸಾಕಷ್ಟು ಅನಾಹುತಗಳನ್ನೇ ಸೃಷ್ಟಿಸುತ್ತಿವೆ. ಇನ್ನು ಗದಗ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ, ಮನೆಯ ಮೇಲ್ಛಾವಣಿ ಕುಸಿದು, ಅಜ್ಜಿ ಮತ್ತು ಮೊಮ್ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೆಹಬೂಬಿ(56), ಮುಸ್ಕಾನ್(8), ನಾಜೀಯಾ(10) ಮೃತ ದುರ್ದೈವಿಗಳು. ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ