ಸಿಲಿಂಡರ್ ಸ್ಪೋಟಕ್ಕೆ ಕುಸಿದ ಕಟ್ಟಡ !

Kannada News

16-10-2017

ಬೆಂಗಳೂರು: ಸಿಲಿಂಡರ್​ ಸ್ಫೋಟದಿಂದ ಮೂರು ಅಂತಸ್ತಿನ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಈಜೀಪುರದ ಗುಂಡಪ್ಪ ಲೇಔಟ್​​ ನಲ್ಲಿ ಈ ದುರ್ಘಟನೆ ನಡೆದಿದ್ದು, ನಿರಂತರ ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಸೋಮವಾರ ಬೆಳಿಗ್ಗೆ ಆರು ಗಂಟೆಯ ಹೊತ್ತಿಗೆ ಸಿಲಿಂಡರ್​ ಸ್ಫೋಟದಿಂದ ಕುಸಿದಿದೆ.

ಗ್ರೀನ್‍ವ್ಯೂ ಹೋಟೆಲ್ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ರವಿಚಂದ್ರ ಹಾಗೂ ಕಲಾವತಿ ಹಾಗೂ ಮತ್ತಿಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.  ಬೆಳಗ್ಗೆ 7.10ಕ್ಕೆ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಸುಮಾರು 7.15ಕ್ಕೆ ಕಟ್ಟಡ ಕುಸಿದಿದೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಅಗ್ನಿಶಾಮಕ ದಳ ಸಿಬ್ಬಂದಿಯ ಮೇಲೂ ಗೋಡೆ ಕುಸಿದಿದ್ದು ಸುರೇಶ್, ಸುಬಾನ್, ಸೋಮಶೇಖರ್ ಎಂಬವರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ