ಹೊಂಡಕ್ಕೆ ಬಿದ್ದ ಮೂವರ ದುರ್ಮರಣ !

Kannada News

16-10-2017

ಬೀದರ್: ರಾತ್ರಿ ಸುರಿದ ಕುಂಭದ್ರೋಣ ಮಳೆಯಿಂದಾಗಿ, ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಲಾಡವಂತಿ ಗ್ರಾಮದಲ್ಲಿ ಬೆಳಗಿನ ಜಾವ ಸಂಭವಿಸಿದೆ. ಮನೆ ಹೊರಗಡೆ ಬಂದ ಮೂವರು, ನೀರು ನಿಂತಿದ್ದರಿಂದ ರಸ್ತೆ ಯಾವುದು, ಹೊಂಡ ಯಾವುದು ಎಂದು ತಿಳಿಯದೆ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ಲಕ್ಷ್ಮಿ ಇಂದ್ರಜಿತ್ ವಾಡೇಕರ್(52), ಕೇಶವ ಬಾಬುರಾವ್ ಬೈನಾಕೆ(40) ಮತ್ತು ಸತ್ಯವತಿ ಕೇಶವ ಬೈನಾಕೆ(32) ಎಂದು ಗುರುತಿಸಲಾಗಿದೆ. ಮಂಟಾಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಇನ್ನು ಕೂಡ ಧಾರಾಕಾರ ಮಳೆ ಮುಂದುವರೆದಿದ್ದು, ಇಲ್ಲಿನ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ