ಖಾಸಗಿ ಬಸ್ ಗಳಿಗೆ ದೀಪಾವಳಿ ಲಾಭ !

Kannada News

16-10-2017

ಬೆಂಗಳೂರು: ನಗರದಲ್ಲಿ ನೆಲೆಸಿರುವವರು ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗಲು ಸಿದ್ಧತೆ ನಡೆಸಿದ್ದು, ಇದರಿಂದಾಗಿ ಬಸ್‌ ಗಳಿಗೆ ಬೇಡಿಕೆ ಗಣನೀಯವಾಗಿ ಹೆಚ್ಚಿದೆ. ಪರಿಸ್ಥಿತಿಯ ಲಾಭ ಪಡೆಯಲು ಖಾಸಗಿ ಬಸ್‌ ಮಾಲೀಕರು ಪ್ರಯಾಣದರವನ್ನೂ ದುಪ್ಪಟ್ಟು ಮಾಡಿದ್ದಾರೆ.

ಬೇಡಿಕೆ ಹೆಚ್ಚಿರುವುದರಿಂದ ಖಾಸಗಿ ಸಂಸ್ಥೆಗಳು ಬಸ್‌ ಪ್ರಯಾಣ ದರವನ್ನೂ ಹೆಚ್ಚಿಸಿವೆ ದೀಪಾವಳಿ. ಇದೇ 18ರಿಂದ ಆರಂಭವಾಗುವುದರಿಂದ 17ರಂದು ಬಸ್‌ ಗಳ ಬೇಡಿಕೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. 17ರಂದು ರಾತ್ರಿ ಮೆಜೆಸ್ಟಿಕ್‌ ಸುತ್ತಮುತ್ತ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಂಚಾರ ಪೊಲೀಸರು, ಅಂದು ಸಂಚಾರ ಮಾರ್ಗ ಬದಲಾವಣೆಗೆ ಸೂಚಿಸಿದ್ದಾರೆ. ಖಾಸಗಿ ವಾಹನಗಳು ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಪ್ರದೇಶವನ್ನು ಪ್ರವೇಶಿಸದಂತೆ ನಿರ್ಬಂಧ ವಿಧಿಸಿದ್ದಾರೆ.

ಈ ಕಾರಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ.ಎಸ್‌.ಆರ್‌.ಟಿ.ಸಿ) ಅಂದು 1,500 ವಿಶೇಷ ಬಸ್‌ ಗಳ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದೆ. ಹೆಚ್ಚುವರಿ ಬಸ್‌ ಗಳು ವಿಜಯನಗರ, ಯಶವಂತಪುರ ನಿಲ್ದಾಣಗಳಿಂದ ಹೊರಡಲಿವೆ. ನಿಗಮದ ಹಾಗೂ ಖಾಸಗಿ ಕಂಪೆನಿಗಳ ಬಸ್‌ ಪ್ರಯಾಣಕ್ಕಾಗಿ ಹಲವರು, ಈಗಾಗಲೇ ಆನ್‌ ಲೈನ್‌ ಮೂಲಕ ಟಿಕೆಟ್‌ ಕಾಯ್ದಿರಿಸಿದ್ದಾರೆ.‌‌ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ