ರಸ್ತೆ ಮೇಲೆ ಮಲಗಿ ಪ್ರತಿಭಟನೆ !

Kannada News

16-10-2017

ಬೆಳಗಾವಿ: ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ, ಬೆಳಗಾವಿ ಜಿಲ್ಲೆಯ ಕಣಕುಂಬಿಯಲ್ಲಿ ರಸ್ತೆ ಮೇಲೆ ಮಲಗಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.

ಕಳಸಾ ಬಂಡೂರಿ ಯೋಜನೆಯನ್ನು ಕೇಂದ್ರ ಜಾರಿಗೊಳಿಸಬೇಕು, ಕನ್ನಡಿಗರಿಗೆ ಕುಡಿಯುವ ನೀರು ಸಿಗಬೇಕು ಎಂದು ಕಪ್ಪು ಬಟ್ಟೆ ಪ್ರದರ್ಶಿಸಿ ವಾಟಾಳ್ ಪ್ರತಿಭಟನೆ ನಡೆಸಿದರು. ಕನ್ನಡ ಮತ್ತು ಪ್ರಗತಿಪರ ಚಿಂತನೆಯ ಸಂಘಟನೆಗಳ ಒಕ್ಕೂಟ ಅಕ್ಟೋಬರ್ 21 ರಂದು ದೆಹಲಿ ಸಂಸತ್ ಭವನದ  ಎದುರು ಯೋಜನೆ ಜಾರಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದೆ. ಈ ಹೋರಾಟದಲ್ಲಿ ನಾಡಿನ ಹಿತಾಸಕ್ತಿಗಾಗಿ ರಾಜ್ಯದ ಸಂಸದರು ರಾಜೀನಾಮೆ ನೀಡಿ, ಕೇಂದ್ರಕ್ಕೆ ಯೋಜನೆ ಜಾರಿಗೆ ಒತ್ತಾಯಿಸಬೇಕು ಎಂದರು. ಈ ವೇಳೆ ರಸ್ತೆ ತಡೆ ನಡೆಸಿ ವಾಟಾಳ್ ನಾಗರಾಜ್ ಅವರನ್ನು ಖಾನಾಪುರ ಪೊಲೀಸರು ಬಂಧಿಸಿ ಬಿಡುಗಡೆ ಗೊಳಿಸಿದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ