ಗುಡ್ಡ ಕುಸಿತ: ಆತಂಕದಲ್ಲಿ ಪ್ರಯಾಣಿಕರು !

Kannada News

16-10-2017 459

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿಯಲ್ಲಿ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ, ಮೂಡಿಗೆರೆಯಿಂದ ಧರ್ಮಸ್ಥಳ, ಮಂಗಳೂರು, ಮಣಿಪಾಲ್‍ಗೆ ಸಂಪರ್ಕ ಕಲ್ಪಿಸೋ ಚಾರ್ಮಾಡಿಯಲ್ಲಿ ಗುಡ್ಡ ಕುಸಿದಿದೆ.

ಅದೃಷ್ಟವತಾಶ್ ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ನಿನ್ನೆ ಸಂಜೆ ಸುಮಾರು 5.30 ರಿಂದ 6 ಗಂಟೆಗೆ ಗುಡ್ಡ ಕುಸಿದಿದ್ದು, ಪ್ರವಾಸಿಗರು ಆತಂಕಕ್ಕೀಡಾಗಿದ್ದಾರೆ. ಗುಡ್ಡ ಕುಸಿತದಿಂದಾಗಿ ಒಂದು ಗಂಟೆಗೂ ಅಧಿಕ ಕಾಲ ಸುಮಾರು ಎರಡು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು. ಈ ಮಾರ್ಗ ಕಿರಿದಾದ ರಸ್ತೆಯಾಗಿರೋದ್ರಿಂದ ವಾಹನಗಳು ನಿಂತಲ್ಲೇ ನಿಂತಿದ್ದವು.  ಕೂಡಲೇ ಸ್ಥಳಕ್ಕಾಗಮಿಸಿದ ಬಣಕಲ್ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ. ಇಲ್ಲಿ ಮಳೆ ಹೆಚ್ಚಾಗಿದ್ದು, ಸದಾ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಯಾವಾಗ, ಏನಾಗುತ್ತೆ ಎಂದು ಆತಂಕದಲ್ಲಿ ಸಂಚರಿಸುತ್ತಿದ್ದಾರೆ.

 
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ