ಸಾವು ಗೆದ್ದ ಬಾಲಕಿ..

Kannada News

16-10-2017

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಕುಸಿದು ಬಿದ್ದ ಕಟ್ಟಡದ ಅವಶೇಷಗಳಡಿ ಸುಮಾರು 5 ಗಂಟೆಗಳ ಕಾಲ ಸಿಲುಕಿದ್ದ  3 ವರ್ಷದ ಹೆಣ್ಣು ಮಗು ಪವಾಡಸದೃಶವಾಗಿ ಬದುಕುಳಿದಿದೆ. ಅವಶೇಷಗಳಡಿ ಸಿಲುಕಿದ್ದ 3 ವರ್ಷದ ಸಂಜನಾ ಸಾವನ್ನೇ ಗೆದ್ದು ಬಂದಿದ್ದು ಆಳುತ್ತಿದ್ದ ಸಂಜನಾಳನ್ನು ಕಟ್ಟಡದ ಅವಶೇಷಗಳಡಿಯಿಂದ ಹೊರಗೆ ತೆಗೆಯುತ್ತಿದ್ದಂತೆಯೇ ಅಲ್ಲಿ ಸೇರಿದ್ದವರು ಶಿಳ್ಳೆ ಹಾಗೂ ಚಪ್ಪಾಳೆ ತಟ್ಟಿ ಹರ್ಷೋದ್ಗಾರ ಮಾಡಿದರು.

ಕುಸಿದು ಬಿದ್ದ ಕಟ್ಟಡದ ತೆರವಿಗೆ ಜೆಸಿಬಿ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಅವಶೇಷಗಳಡಿಯಿಂದ ಮಗು ಅಳುತ್ತಿರುವ ಸದ್ದು ಕೇಳಿಸಿದೆ. ತಕ್ಷಣ ಜೆಸಿಬಿ ಮೂಲಕ ನಡೆಸುತ್ತಿದ್ದ ಕಾರ್ಯಾಚರಣೆಯನ್ನು ಅಗ್ನಿಶಾಮಕ ಸಿಬ್ಬಂದಿ ನಿಲ್ಲಿಸಿದ್ದಾರೆ. ಬಳಿಕ ತಾವೇ ಸ್ವತಃ ಒಂದೊಂದೇ ಕಲ್ಲು, ಇಟ್ಟಿಗೆಗಳನ್ನು ತೆಗೆಯುತ್ತಿದ್ದಾಗ ಸಂಜನಾ ಅಗ್ನಿಶಾಮಕ ಸಿಬ್ಬಂದಿ ಕೈಗೆ ಸಿಕ್ಕಿದ್ದಾಳೆ. ಮಗುವನ್ನು ಅಂಬುಲೆನ್ಸ್ ನಲ್ಲಿ ಸಮೀಪದ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಆಕೆ ಚೇತರಿಸಿಕೊಂಡಿದ್ದಾಳೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ