ನೈಜೀರಿಯನ್ ಪ್ರಜೆ ಬಂಧನ

Kannada News

17-10-2017

ಉಡುಪಿ: ವೀಸಾ ಅವಧಿ ಮುಗಿದರೂ ಸಹ, ಭಾರತದಲ್ಲೇ ಉಳಿದಿದ್ದ ನೈಜೀರಿಯನ್ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ರಾಜಿರಕೀಬ್ ಬಬತುಂಡೆ ಬಂಧಿತ ನೈಜೀರಿಯಾದ ಪ್ರಜೆ. ಉಡುಪಿ ಪೊಲೀಸರು ಈತನನ್ನು ಬಂಧಿಸಿದ್ದು, ನ್ಯಾಯಾಂಗ ತನಿಖೆಗೆ ಒಳಪಡಿಸಿದ್ದಾರೆ. ಮಣಿಪಾಲ ವಿವಿ ವಿದ್ಯಾರ್ಥಿಯಾಗಿ ಭಾರತಕ್ಕೆ ಬಂದಿದ್ದ ರಾಜಿರಕೀಬ, ಮಣಿಪಾಲ್ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ . ಇತನನ್ನು ಪೊಲೀಸರು, ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ