ಸಿದ್ದು-ಪರಂ ಮಾಸ್ಟರ್ ಪ್ಲಾನ್

Kannada News

17-10-2017

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಪರಮೇಶ್ವರ್, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ. ಅದಕ್ಕಾಗಿಯೇ ಕಾಂಗ್ರೆಸ್' ನಲ್ಲಿ ಹೊಸ ಇತಿಹಾಸವನ್ನೇ ಬರೆಯಲು ಮುಂದಾಗಿರುವ ಇವರು, ಬಿಜೆಪಿಯಿಂದ ದೂರವಾಗಿರುವ ಲಿಂಗಾಯತರನ್ನು ಕಾಂಗ್ರೆಸ್​'ಗೆ ಸೆಳೆಯಲು ಮುಂದಾಗಿದ್ದಾರೆ. ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕದಲ್ಲಿನ ಲಿಂಗಾಯತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿತ್ತು. ಇದೀಗ ಪ್ರತ್ಯೇಕ ಧರ್ಮದ ಹೋರಾಟದ ಮೂಲಕ ಸ್ವಲ್ಪ ಪ್ರಮಾಣದ ಲಿಂಗಾಯತರು ಬಿಜೆಪಿಯಿಂದ ದೂರವಾಗಲಿದ್ದಾರೆ. ಬಿಜೆಪಿಯಿಂದ ದೂರವಾಗಿರುವ ಲಿಂಗಾಯತರನ್ನು ಕಾಂಗ್ರೆಸ್'​ಗೆ ಸೆಳೆಯೋ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಟಿಕೇಟ್ ನೀಡೋ ಪ್ಲಾನ್​ ಮಾಡಿದ್ದಾರೆ. ಕಾಂಗ್ರೆಸ್ ನಿಂದ 2013ರಲ್ಲಿ 44 ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡಿದ್ದರೆ, ಈ ಬಾರಿ 60 ರಿಂದ 65 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವ ಚಿಂತನೆಯಲ್ಲಿದೆ ಎನ್ನಲಾಗಿದೆ. ಈಗಾಗಲೇ ಅಹಿಂದ ಮತಗಳು ಕಾಂಗ್ರೆಸ್'​ಗೆ ಗಟ್ಟಿ ಅನ್ನೋ ವಿಶ್ವಾಸದಲ್ಲಿರೋ ಸಿದ್ದರಾಮಯ್ಯ, ಪರಮೇಶ್ವರ್ ಶೇ 15 ರಷ್ಟು ಲಿಂಗಾಯತ ಮತಗಳು ಸಿಕ್ಕರೂ ಸಾಕು, ಉಳಿದ ಅಹಿಂದ ಮತಗಳು ಬಂದೇ ಬರುತ್ತೆ, ಅಭ್ಯರ್ಥಿ ಗೆದ್ದೇ ಗೆಲ್ತಾನೆ ಅನ್ನೋ ನಂಬಿಕೆಯಲ್ಲಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ