ಪೊಲೀಸ್ ಪೇದೆ ಹತ್ಯೆಗೆ ಯತ್ನ !

Kannada News

17-10-2017

ಮಂಗಳೂರು: ಮಂಗಳೂರಿನ ಕಂಡ್ಲೂರಿನಲ್ಲಿ  ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ತಡೆದ ಪೊಲೀಸ್‌ ಪೇದೆಯೊಬ್ಬರ ಮೇಲೆ ವಾಹನ ಹತ್ತಿಸಿ ಹತ್ಯೆಗೈಯಲು ಯತ್ನಿಸಿ ಪರಾರಿಯಾದ ಘಟನೆ ನಡೆದಿದೆ. ಪಿಕ್ ಅಪ್ ವಾಹನದಲ್ಲಿ ಸುಮಾರು 25 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ತಡೆಯಲು ಮುಂದಾದಾಗ, ಈ ಘಟನೆ ನೆಡದಿದೆ. ಇನ್ನು ವಾಹನ ನಿಲ್ಲಿಸಿ ಆರೋಪಿ ಪರಾರಿಯಾಗಿದ್ದಾನೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪೇದೆ ಪ್ರಶಾಂತ್‌ ನಾಗಣ್ಣ ಅವರನ್ನು, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಎಸಗಿದ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ