ಮಹಾಮಸ್ತಕಾಭಿಷೇಕಕ್ಕೆ ವಿಶೇಷ ರೈಲು

Kannada News

17-10-2017

ಬೆಂಗಳೂರು: ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಗೊಮ್ಮಟೇಶ್ವರ ಮೂರ್ತಿಗೆ ಫೆಬ್ರವರಿಯಲ್ಲಿ ನಡೆಯಲಿರುವ, ಮಹಾಮಸ್ತಕಾಭಿಷೇಕಕ್ಕೆ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಒಂದು ತಿಂಗಳು ವಿಶೇಷ ರೈಲುಗಳ ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಸಿದ್ಧತೆ ನಡೆಸಿದೆ.

ಫೆ.7ರಿಂದ 26ರವರೆಗೆ ಮಸ್ತಕಾಭಿಷೇಕ ನಡೆಯಲಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಶ್ರವಣಬೆಳಗೊಳ ಮಾರ್ಗವಾಗಿ ಹಾಸನದವರೆಗೆ ವಿಶೇಷ ರೈಲುಗಳು ಸಂಚರಿಸಲಿವೆ. ‘ಈ ಸಂಬಂಧ ಶ್ರವಣಬೆಳಗೊಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಜನವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎನ್ನಲಾಗಿದೆ. ಎಷ್ಟು ವಿಶೇಷ ರೈಲುಗಳು ಸಂಚರಿಸಬೇಕು ಎಂಬುದನ್ನು ಯಾತ್ರಾರ್ಥಿಗಳ ಸಂಖ್ಯೆ ಆಧರಿಸಿ ನಿರ್ಧರಿಸಲಾಗುವುದು’ ಎಂದು ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ