ಭಾರೀ ಮಳೆ: ಸೇತುವೆ ಜಲಾವೃತ !

Kannada News

17-10-2017

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ ನದಿ ನೀರಿನ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಇದರಿಂದ ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗಿದೆ. ಆಲಮಟ್ಟಿ ಜಲಾಶಯಕ್ಕೆ 90 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯ ಭರ್ತಿಯಾಗಿರುವುದರಿಂದ 15 ಗೇಟ್‌ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ.

ಕೃಷ್ಣಾ ನದಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ– ಯಡೂರ ಕೆಳಮಟ್ಟದ ಸೇತುವೆ ಜಲಾವೃತವಾಗಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜಿನಿಂದ 20 ಸಾವಿರ ಕ್ಯುಸೆಕ್‌ ನೀರು ಬಿಟ್ಟಿದ್ದು, ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ಜಿಲ್ಲೆಯ ಜಲಾನಯನ ಪ್ರದೇಶದಲ್ಲಿಯೂ ಹೆಚ್ಚಿನ ಮಳೆಯಾಗುತ್ತಿದೆ. ಖಡಕಲಾಟ ಗ್ರಾಮದ ಬಳಿಯ ಹಳ್ಳದ ನೀರಿನಲ್ಲಿ ಏಳು ಜಾನುವಾರು ಕೊಚ್ಚಿ ಹೋಗಿವೆ.

ಡೋಣಿ ನದಿಯೂ ಉಕ್ಕಿ ಹರಿಯುತ್ತಿದ್ದು, ಸಾರವಾಡ ಗ್ರಾಮದ ಬಳಿ ಹೊಲಗಳಿಗೆ ನೀರು ನುಗ್ಗಿದ್ದು, ಬೆಳೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಸಿದ್ಧೇಶ್ವರ ಸೂಪರ್ ಬಜಾರದೊಳಕ್ಕೆ ನೀರು ನುಗ್ಗಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ನೀರು ಪಾಲಾಗಿವೆ. ಧಾರವಾಡ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ