600ಕೆ.ಜಿ ಗಾಂಜಾ ಸೊಪ್ಪು ವಶ !

Kannada News

17-10-2017

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಪುರ ಗ್ರಾಮದಲ್ಲಿ ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ದಾಳಿ ನಡೆಸಿದ ಪೊಲೀಸರು, ಸುಮಾರು 8 ಲಕ್ಷ ಮೌಲ್ಯದ 600 ಕೆ.ಜಿ ಗಾಂಜಾ ಸೊಪ್ಪು ವಶಪಡಿಸಿಕೊಂಡಿದ್ದಾರೆ. ಶ್ರೀನಿವಾಸ್ ಎಂಬಾತ ಒಂದೂವರೆ ಎಕರೆ ಜಮೀನಿನಲ್ಲಿ ಚಿಕ್ಕಡಿ ಕಾಯಿ ಬೆಳೆ ನಡುವೆ ಗಾಂಜಾ ಗಿಡಗಳನ್ನು ಬೆಳೆದಿದ್ದ. ಈ ಬಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಶ್ರೀನಿವಾಸ್‌ ತಲೆಮರೆಸಿಕೊಂಡಿದ್ದಾನೆ. ‘ಆರೋಪಿಗೆ ಗಾಂಜಾ ಸಸಿಗಳನ್ನು ಕೊಟ್ಟವರು ಯಾರು ಮತ್ತು ಆತ ಎಲ್ಲಿಗೆ ಗಾಂಜಾ ಸೊಪ್ಪು ಪೂರೈಸುತ್ತಿದ್ದ ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ