ಹಳೆ ಬಿಲ್ಡಿಂಗ್ ಕುಸಿತ: ಮಾಲೀಕ ಅರೆಸ್ಟ್ !

Kannada News

17-10-2017 278

ಬೆಂಗಳೂರು: ನಗರದ ಈಜಿಪುರದಲ್ಲಿ ಸೋಮವಾರ ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದು ಏಳು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಗಣೇಶ್ ಬಂಧಿತ ಮನೆ ಮಾಲೀಕನಾಗಿದ್ದಾನೆ. ಘಟನೆ ನಡೆದ ನಂತರ ವಿವೇಕನಗರ ಪೊಲೀಸರು ಗಣೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಐಪಿಸಿ ಸೆಕ್ಷನ್ 304 ಎ, 336 ಮತ್ತು 339 ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.

ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಬಾಡಿಗೆಗೆ ನೀಡಿದ್ದು, ಅನುಮತಿ ಇಲ್ಲದೇ ಮೂರಂತಸ್ತಿನ ಕಟ್ಟಡ ಕಟ್ಟಿದ್ದ ಹಿನ್ನೆಲೆಯಲ್ಲಿ, ಈ ಪ್ರಕರಣ ದಾಖಲಿಸಲಾಗಿದೆ. ಕೆಳ ಅಂತಸ್ತನ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಇಡೀ ಮನೆಯೇ ಕುಸಿದಿತ್ತು. ಇದರಿಂದಾಗಿ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಈ ಘಟನೆಯಲ್ಲಿ ಒಟ್ಟು ಏಳು ಜನ ಮೃತಪಟ್ಟು ಹಲವರು ಗಾಯಗೊಂಡಿದ್ದರು.

 
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ