ದೇವೀರಮ್ಮ ಬೆಟ್ಟದಲ್ಲಿ ದೀಪಾವಳಿ ಜಾತ್ರೆ

Kannada News

18-10-2017

ಚಿಕ್ಕಮಗಳೂರು: ಚಿಕ್ಕಮಗಳೂರಿನ ದೇವೀರಮ್ಮ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜ್ಯ ಮತ್ತು ಹೊರರಾಜ್ಯಗಳಿಂದ ಭಕ್ತರು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ದೇವೀರಮ್ಮ ಬೆಟ್ಟಕ್ಕೆ ಬಂದಿದ್ದಾರೆ.

ಬುಧವಾರ ಬೆಳಿಗ್ಗೆ ಭಕ್ತರು ಬೆಣ್ಣೆ-ಬಟ್ಟೆ ಕೈಂಕರ್ಯ ನೆರವೇರಿಸಿದರು. ಅಲ್ಲದೆ, ದೇವಿರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ನಾನಾ ರೀತಿಯಲ್ಲಿ ದೇವರ ಮೊರೆ ಹೋಗ್ತಾರೆ. ಆದರೆ ದೇವಿರಮ್ಮನ ಭಕ್ತರು ತಮ್ಮ ಬೇಡಿಕೆ ಈಡೇರಿಕೆಗಾಗಿ ದೇವರೆದುರು ದೇಹವನ್ನು ದಂಡಿಸುತ್ತಾರೆ. ಮತ್ತು ಭಕ್ತರು ಬರಿಗಾಲಲ್ಲೇ 3000 ಅಡಿ ಎತ್ತರದ ಬೆಟ್ಟವನ್ನೇರಿ ಹರಕೆ ತೀರಿಸುತ್ತಾರೆ. ನರಕ ಚತುದರ್ಶಿಯಂದು ಕಾಲಿಗೆ ಚಪ್ಪಲಿಯನ್ನು ಹಾಕದೆ ಕಾಡಿನ ಹಾದಿ, ಕಲ್ಲು-ಮುಳ್ಳುಗಳ ನಡುವೆ ಬೆಟ್ಟವನ್ನೇರಿ ದೇವಿಯ ದರ್ಶನ ಪಡೆದು ಭಕ್ತರು ಪುನೀತರಾಗ್ತಾರೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ದೇವಾಲಯ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ