ಕೆರೆಗೆ ನುಗ್ಗಿದ ಕಾರು: ಮೂವರು ಜಲಸಮಾಧಿ !

Kannada News

19-10-2017

ರಾಮನಗರ: ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಕೆರೆಗೆ ನುಗ್ಗಿದ ಪರಿಣಾಮ ನೀರಿನಲ್ಲಿ ಮುಳುಗಿ ಕಾರಿನಲ್ಲಿದ್ದ ಓರ್ವ ವಿದ್ಯಾರ್ಥಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ ತಾಲ್ಲೂಕಿನ ಕಂಚುಗಾರನಹಳ್ಳಿ ಸಮೀಪದ ಮನಗಾನಹಳ್ಳಿ ಬಳಿ ಈ ದುರ್ಘಟನೆ ನಡೆದಿದ್ದು, ಓರ್ವ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರು ಚಲಾಯಿಸುತ್ತಿದ್ದ ಬಿ.ಕಾಂ ವಿದ್ಯಾರ್ಥಿಯಾದ ಹಾರೋಹಳ್ಳಿ ಸಮೀಪದ ಗೊಟ್ಟಿಗೆಹಳ್ಳಿ ನಿವಾಸಿ ಚಿದಾನಂದ್ ಮತ್ತು ಆತನ ಅಕ್ಕನ ಮಕ್ಕಳಾದ ಶಶಾಂಕ್ ಮತ್ತು ಇಂಪನ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಒಂದೇ ಕುಟುಬಂದ ಮೂವರನ್ನು ಕಳೆದುಕೊಂಡಿರುವ ಕುಟುಬಂಸ್ಥರ  ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಬಿಡದಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

 


ಸಂಬಂಧಿತ ಟ್ಯಾಗ್ಗಳು

Kannada News Karnataka ಜಲಸಮಾಧಿ ಸ್ವಿಫ್ಟ್ ಕಾರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ