ವಿಶೇಷ ಪ್ಯಾಕೇಜ್ ಗೆ ಕೋನರೆಡ್ಡಿ ಆಗ್ರಹ !

Kannada News

19-10-2017

ಧಾರವಾಡ: ಉತ್ತರ ಕರ್ನಾಟಕ ಭಾಗವು ಕಳೆದ ನಾಲ್ಕು ವರ್ಷಗಳಿಂದ ಸತತ ಬರಗಾಲಕ್ಕೆ ತುತ್ತಾಗಿದೆ. ಈ ಬಾರಿ ಅತಿಯಾದ ಮಳೆಯಿಂದ ಅತಿವೃಷ್ಟಿಯಾಗಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ, ಕೂಡಲೇ ಧಾರವಾಡದ ನವಲಗುಂದ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ ಅವರು, ಬರಗಾಲ ಹಾಗೂ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಇದರಿಂದ ರೈತರು ಬೀದಿಗೆ ಬಿದ್ದಂತಾಗಿದೆ ಎಂದರು. ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ರೈತರ ನೆರವಿಗೆ ಮುಖ್ಯಮಂತ್ರಿಗಳು ಆಸಕ್ತಿ ತೋರಿಸಿ, ಆತಂಕಕ್ಕೊಳಗಾಗಿರುವ ರೈತರಿಗೆ ಧೈರ್ಯ ತುಂಬಬೇಕು ಎಂದು, ಶಾಸಕ ಎನ್.ಎಚ್.ಕೋನರೆಡ್ಡಿ ಮನವಿ ಮಾಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ