ಕೆರೆಯಲ್ಲಿ ತೇಲಿಬಂದ ಶವಗಳು !

Kannada News

19-10-2017

ಕೊಪ್ಪಳ: ಕಾಲುಜಾರಿ ಕೆರೆಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆಯು, ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲ್ಲೂಕಿನ ಕೆರೆಹಳ್ಳಿ ಗ್ರಾಮದ, ಕರಿಯಣ್ಣ ಬಾಳಪ್ಪ ವಾಲಿಕಾರ (14) ಹಾಗೂ ಲಿಂಗಜ್ಜ ಮೈಲಾರಗೌಡ (14) ಎಂದು ಮೃತರನ್ನು ಗುರುತಿಸಲಾಗಿದೆ. ಹೊಲಕ್ಕೆ ತೆರಳಿದ್ದ ವೇಳೆ ಇಬ್ಬರೂ ಬಾಲಕರು ಕಾಲು ಜಾರಿ ಕೆರೆಯಲ್ಲಿ ಮುಳುಗಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರ ಶವಗಳು ಕೆರೆಯಲ್ಲಿ ತೇಲುತ್ತಿರುವುದನ್ನು ಗ್ರಾಮಸ್ಥರು ಗಮನಿಸಿದ ಮೇಲೆ ಘಟನೆ ಬೆಳಕಿಗೆ ಬಂದಿದೆ ಎಂದು, ಪೊಲೀಸರು ತಿಳಿಸಿದ್ದಾರೆ. ಇನ್ನು ಬಾಲಕರನ್ನು ಕಳೆದುಕೊಂಡಿರುವ ಕುಟುಂಬಸ್ಥರ ರೋಧನ ಹೇಳತೀರದಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ