ಭೀಕರ ರಸ್ತೆ ಅಪಘಾತ ನಾಲ್ವರ ಸಾವು !

Kannada News

21-10-2017

ಬಳ್ಳಾರಿ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆಯ, ಬಳ್ಳಾರಿಯಲ್ಲಿ ಸಂಭವಿಸಿದೆ. ಅಲ್ಲದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಹೊಸಪೇಟೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಸಪೇಟೆ ತಾಲ್ಲೂಕಿನ ಪಿ.ಕೆ ಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 14ರಲ್ಲಿ ಈ ಭೀಕರ ಅಪಘಾತ ನಡೆದಿದೆ. ಇನ್ನು ಸ್ಥಳಕ್ಕೆ ಹೊಸಪೇಟೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯ ಕಾರಣ ಎಂದು ಶಂಕಿಸಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ