ಗೋವುಗಳ ರಕ್ಷಣೆ !

Kannada News

21-10-2017

ತುಮಕೂರು: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತಿದ್ದ 40 ಜಾನುವಾರುಗಳ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನ ಗುಬ್ಬಿ ತಾಲ್ಲೂಕಿನ ಹೊಸಳ್ಳಿ ಬಳಿ ನಡೆದಿದೆ. ಭಜರಂಗದಳದ ಕಾರ್ಯಕರ್ತರು ಗುಬ್ಬಿಯಿಂದ ಮೈಸೂರು ಕಡೆಗೆ ಸಾಗಿಸುತ್ತಿದ್ದ ಗೋವುಗಳನ್ನು ತುಂಬಿದ್ದ ಲಾರಿಗಳನ್ನ ತಡೆಹಾಕಿ, ನಂತರ ಗುಬ್ಬಿ ಪೋಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೋಲಿಸರು ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಗೋಶಾಲೆಗೆ ಬಿಟ್ಟಿದ್ದಾರೆ. ಲಾರಿ ಚಾಲಕ ಮತ್ತು ಕ್ಲೀನರ್ ನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಭಜರಂಗದಳದ ಗೋವುಗಳ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ