ಮಧ್ಯರಾತ್ರಿಲೀ…ಬೆಂಗ್ಳೂರ್ ರಸ್ತೇಲಿ…

Kannada News

21-10-2017

ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆ ಬಿಡುವು ಕೊಟ್ಟಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ಸಮರೋಪಾದಿಯಲ್ಲಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮಧ್ಯರಾತ್ರಿಯಲ್ಲಿ ನಗರದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟ ಪರಿಶೀಲನೆ ನಡೆಸಿದ್ದಾರೆ.

ಮೇಯರ್ ಆರ್.ಸಂಪತ್ ರಾಜ್, ಆಯುಕ್ತ ಎನ್.ಮಂಜುನಾಥ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ಮಧ್ಯರಾತ್ರಿ ಚಾಲುಕ್ಯ ವೃತ್ತದಿಂದ ಪರಿಶೀಲನೆ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್, ಸುಮಾರು 200ಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚುವ, ರಸ್ತೆ ಸರಿಪಡಿಸುವ ವೇಳೆ ಖುದ್ದು ಸ್ಥಳದಲ್ಲಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ