‘ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ’

Kannada News

21-10-2017

ಬೆಂಗಳೂರು: ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿರುವ ಸಂಸದೆ ಶೋಭಾ ಕರಂದ್ಲಾಜೆ ಅವರು, ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಂತೆ ತಿಳಿಸಿದ್ದಾರೆ. ಜೊತೆಗೆ, ಟಿಪ್ಪು ಕನ್ನಡ ಹಾಗೂ ಹಿಂದೂ ವಿರೋಧಿ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಟಿಪ್ಪು ಜಯಂತಿ ಸಂಘಟಿಸಲು ಉತ್ಸುಕವಾಗಿದೆ. ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಹಾಕಬಾರದು ಎಂದು ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲಾಧಿಕಾರಿಗಳಿಗೆ ತಿಳಿಸಿರುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರು ಟ್ವೀಟ್‌ ಮಾಡಿದ್ದಾರೆ.

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ