ನೇಣು ಬಿಗಿದುಕೊಂಡ ವಿದ್ಯಾರ್ಥಿ !

Kannada News

23-10-2017 279

ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಹಾಸ್ಟೆಲ್ ನಲ್ಲಿ, ಮೆಡಿಕಲ್ ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಶಿಕಾರಿಪುರ ತಾಲ್ಲಾಕು ಹೊಸೂರು ಗ್ರಾಮದ ರಘು, ನೇಣಿಗೆ ಶರಣಾದ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿ ಸಿಮ್ಸ್ ನಲ್ಲಿ ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಊರಿಗೆ ತೆರಳಿದ್ದ ರಘು ಭಾನುವಾರ ಸಂಜೆ ಮರಳಿ ಹಾಸ್ಟೆಲ್ ಗೆ ಬಂದಿದ್ದ. ಇನ್ನು ಆತನ ರೂಮ್ ಮೇಟ್ ಹಾಸ್ಟೆಲ್ ಗೆ ಬಂದಾಗ, ರಘು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ