ಕಾಲುವೆಗೆ ಉರುಳಿದ ಕಾರು !

Kannada News

23-10-2017

ತುಮಕೂರು: ಹೇಮಾವತಿ ಕಾಲುವೆಗೆ ಕಾರು ಬಿದ್ದು ಸ್ಥಳದಲ್ಲೇ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆಯು ತುಮಕೂರಿನಲ್ಲಿ ನಡೆದಿದೆ. ಇನ್ನು ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮೂವರೂ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಾಳೆನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಹೇಮಾವತಿ ಕಾಲುವೆಗೆ ಸ್ವಿಪ್ಟ್ ಕಾರು ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಒಂದು ವರ್ಷದ ಗಂಡು ಮಗು ಮೃತಪಟ್ಟಿದೆ. ಕಾರಿನಲ್ಲಿದ್ದವರು ಮೈಸೂರು ಮೂಲದವರು ಎನ್ನಲಾಗಿದೆ. ಗುಬ್ಬಿ ತಾಲ್ಲೂಕಿನ ಕೆಜಿ ಟೆಂಪಲ್ ಗೆ ಬರುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಶಂಕಿಸಲಾಗಿದೆ. ಗುಬ್ಬಿಯ ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ