ಕೆಟ್ಟುನಿಂತಿದ್ದ ಕಾರಿಗೆ ಲಾರಿ ಡಿಕ್ಕಿ !

Kannada News

23-10-2017

ತುಮಕೂರು: ಕೆಟ್ಟು ನಿಂತಿದ್ದ ಕಾರಿಗೆ, ವೇಗವಾಗಿ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ದೀಪಾವಳಿ ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ಸಂದಭ೯ದಲ್ಲಿ ಅಪಘಾತ ನಡೆದಿದೆ. ತಾಲ್ಲೂಕಿನ ದಾಸರಹಳ್ಳಿ ಬಳಿಯ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತಿದ್ದ ಕಾರಿಗೆ, ಲಾರಿ ಏಕಾಏಕಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಂಗನಾಥ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತು ಮನು ಎಂಬುವರಿಗೆ ತೀವ್ರ ಗಾಯಗಳಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಈ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಅದಲ್ಲದೇ ಕಾರಿನಲ್ಲಿದ್ದ ವಿಜಯ್ ಮತ್ತು ಕಲ್ಯಾಣ್ ಎಂಬುವರಿಗೂ ಗಾಯಗಳಾಗಿದ್ದು, ಕೊರಟಗೆರೆಯ ಸಾವ೯ಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರಟಗೆರೆ ಮುಖ್ಯರಸ್ತೆಯಲ್ಲಿ ರಾತ್ರಿ ವೇಳೆ ಎಗ್ಗಿಲ್ಲದೇ ನೂರಾರು ಲಾರಿ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಸಾವ೯ಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಲಾರಿ ಡಿಕ್ಕಿ ಕೊರಟಗೆರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ