ಕಮಲಕ್ಕೆ ಜಿಗಿದ ಕಾಂಗ್ರೆಸ್ ಮಾಜಿ ಶಾಸಕ !

Kannada News

23-10-2017

ಬಳ್ಳಾರಿ: ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾದ ಬೀದರ್ ಮಾಜಿ ಶಾಸಕ ಎಂ.ಜಿ ಮುಳೆ ಅವರನ್ನು ಬಿಜೆಪಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷದ ಮುಖಂಡರು ಅವರನ್ನು ಬಿಜೆಪಿಗೆ ಬರ ಮಾಡಿಕೊಂಡರು. ಬಸವಕಲ್ಯಾಣ ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ, ಬಿಜೆಪಿ ಮುಖಂಡರಾದ ಜಗದೀಶ್ ಶೆಟ್ಟರ್, ಬಿ.ಶ್ರೀರಾಮುಲು, ಮಾಜಿ ಸಚಿವ ಲಕ್ಷ್ಮಣ ಸವದಿ ಹಾಗೂ ಸಂಸದ ಭಗವಂತ ಖೂಬಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಮುಳೆ ಬಿಜೆಪಿ ಸೇರ್ಪಡೆಯಾಗುವ ಮೂಲಕ, ಗಡಿ ಜಿಲ್ಲೆ ಬೀದರ್ ರಾಜಕೀಯದಲ್ಲಿ ಸಂಚಲನ ಮೂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಮಾಜಿ ಶಾಸಕ ಎಂ.ಜಿ ಮುಳೆ ಪ್ರಧಾನಿ ಮೋದಿ ಜೀ ಅವರ ಉತ್ತಮ ಕಾರ್ಯಗಳನ್ನು ನೋಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದರು.

ಇನ್ನು ಇದೇ ವೇಳೆ ಮಾತನಾಡಿದ ಮುಳೆ, ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿಯಿಂದ ಬೆಸತ್ತು ನಾನು ಯಾವುದೇ ಬೇಷರತ್’ನಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದರು. ಅಲ್ಲದೇ  ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಸ್ಪರ್ಧಿಸಬೇಕೆಂದು ಒತ್ತಾಯಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ