5 ಜಿಲ್ಲೆಗಳಲ್ಲಿ ಕುಷ್ಠರೋಗ ಸಮೀಕ್ಷೆ..

Kannada News

23-10-2017

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಕುಷ್ಠರೋಗ ಪತ್ತೆಹಚ್ಚಲು ಮನೆ ಮನೆ ಭೇಟಿ ಆಂದೋಲನವನ್ನು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದೆ. ಧಾರವಾಡ, ಕಾರವಾರ, ಬಳ್ಳಾರಿ, ರಾಯಚೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 5 ರವರಗೆ ಕುಷ್ಠರೋಗ ಸಮೀಕ್ಷೆ ಕಾರ್ಯ ನಡೆಸಲಾಗುತ್ತದೆ.

ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಿದ್ದು, ಕುಷ್ಠರೋಗದ ಲಕ್ಷಣಗಳು ಕಂಡು ಬಂದರೆ ಅವರನ್ನು ಗುರುತಿಸಿ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಕಳೆದ ವರ್ಷ ಬಳ್ಳಾರಿ ಮತ್ತು ಚಾಮರಾಜನಗರ ಜಿಲ್ಲೆಗಳನ್ನು ಕುಷ್ಠರೋಗ ಪತ್ತೆ ಸಮೀಕ್ಷೆಗೆ ಒಳಪಡಿಸಲಾಗಿತ್ತು. ಬಳ್ಳಾರಿಯಲ್ಲಿ 121 ಪ್ರಕರಣಗಳು, ಚಾಮರಾಜನಗರದಲ್ಲಿ 16 ಪ್ರಕರಣಗಳು ಪತ್ತೆಯಾಗಿದ್ದವು.

ಕುಷ್ಠರೋಗ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವನ್ನು ಈ ಐದು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತದೆ. ನವೆಂಬರ್ 14ರ ನಂತರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ. ತಪಾಸಣೆ ಸಂದರ್ಭದಲ್ಲಿ ಜನರು ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂ ಸೇವಕರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ. ರೋಗದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆಗೆ ಒಳಗಾಗಬೇಕೆಂದು  ಸಾರ್ವಜನಿಕರಲ್ಲಿ ಮನವಿ ಮಾಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ