ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ..?

Kannada News

23-10-2017

ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು ಅನಿತಾ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ತೀರ್ಮಾನ ಕೈಗೊಂಡಿದ್ದು, ನಮ್ಮ ಕ್ಷೇತ್ರಕ್ಕೆ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಎಂದು ಮಾಜಿ ಶಾಸಕ ಎಂ.ಸಿ.ಅಶ್ವಥ್ ಅವರು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಮನವಿ ಮಾಡಿದ್ದಾರೆ.

ಜಿಲ್ಲಾ ಸಭೆಯಲ್ಲಿ, ಜೆಡಿಎಸ್ ವರಿಷ್ಠರಾದ ದೇವೇಗೌಡರು ಚನ್ನಪಟ್ಟಣ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿಯನ್ನು ಹುಡುಕುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. ಇದರಿಂದ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಗೊಂದಲ ಏರ್ಪಟ್ಟಿದೆ ಎಂದ ಮಾಜಿ ಶಾಸಕ ಎಂ.ಸಿ.ಅಶ್ವಥ್ ಅವರು, ಕಳೆದ ಬಾರಿ ಅನಿತಾ ಕಡಿಮೆ ಅಂತರದ ಮತಗಳಿಂದ ಪರಾಭವಗೊಂಡಿದ್ದರು. ಈ ಬಾರಿ ಅವರ ಮೇಲೆ ತಾಲ್ಲೂಕಿನ ಜನತೆಗೆ ಅನುಕಂಪವಿದ್ದು, ಗೆಲ್ಲುವ ಕಾಲ ಬಂದಿದೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಸುವುದು ಸೂಕ್ತವಾಗಿದೆ. ತಾಲ್ಲೂಕಿನ ಜನತೆ ಸಹ ಪಕ್ಷಾತೀತವಾಗಿ ಬೆಂಬಲ ನೀಡುತ್ತಿದ್ದು , ಈ ಬಗ್ಗೆ ವರಿಷ್ಠರೊಂದಿಗೆ ಮತ್ತೊಮ್ಮೆ ಚರ್ಚೆ ನಡೆಸುವುದಾಗಿ ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ