‘ಪ್ರಧಾನಿ ಆ ರೀತಿ ಮಾತನಾಡಬಾರದು’-ಸಿದ್ದು

Kannada News

23-10-2017

ಹುಬ್ಬಳ್ಳಿ: ಕಲ್ಲಿದ್ದಲು ಗಣಿಗಾರಿಕೆ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಡಿರುವ ಆರೋಪ ಆಧಾರ ರಹಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದರು. ಯಾವುದೇ ಆಧಾರವಿಲ್ಲದ ಯಡಿಯೂರಪ್ಪ ಅವರ ಆರೋಪಗಳಿಗೆ ಹೆಚ್ವು ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಇಂಧನ ಸಚಿವ  ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್  ಹೇಳಿಕೆ ನೀಡಿದ್ದಾರೆ ಎಂದರು.

ವಿಕಾಸ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವರಿಗೆ ಕೇಂದ್ರದಿಂದ ಒಂದು ಪೈಸಾನೂ ಸಿಗಲ್ಲ ಎಂಬ ಪ್ರಧಾನಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಪ್ರಜಾಪ್ರಭುತ್ವದದಲ್ಲಿ ಪ್ರಧಾನಿ ಆ ರೀತಿ ಮಾತನಾಡಬಾರದು. ರಾಜ್ಯ ಸರ್ಕಾರಗಳಿಂದ ತೆರಿಗೆ ಸಂಗ್ರಹ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ಇನ್ನು ಬಿಜೆಪಿಯವರು ಚುನಾವಣೆ ಸಮೀಪಿಸುತ್ತಿದ್ದಂತೆ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ.  ಚುನಾವಣೆ ಹಿನ್ನೆಲೆಯಲ್ಲಿ ನಾವು ಸಮಾವೇಶಗಳನ್ನು ಮಾಡುತ್ತಿಲ್ಲ. ಇಷ್ಟಕ್ಕೂ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಮಾಡುತ್ತಿರುವುದೇನು ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ