ಕೊಲೆ ಆರೋಪಿಗೆ ಗುಂಡೇಟು !

Kannada News

24-10-2017

ರಾಮನಗರ: ತನ್ನನ್ನು ಹಿಡಿಯಲು ಬಂದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಕನಕಪುರ ತಾಲ್ಲೂಕಿನ ಸಾತನೂರಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಕಳೆದ ತಿಂಗಳು ಸೋರೇಕಾಯಿದೊಡ್ಡಿ ಗ್ರಾಮದಲ್ಲಿ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚಂದ್ರನನ್ನು ಹಿಡಿಯಲು ಹೋಗಿದ್ದ ಎಸ್‍ಐ ಅನಂತರಾಮ್ ಅವರಿಗೆ ಚಾಕುವಿನಿಂದ ಇರಿಯಲು ಮುಂದಾದಾಗ ಎಸ್‍ಐ ಗುಂಡು ಹಾರಿಸಿದ್ದಾರೆ.  ಸಾತನೂರಿನ ಚೋಳೇಗೌಡನ ದೊಡ್ಡಿಯಲ್ಲಿ ಈ ಘಟನೆ ನಡೆದಿದೆ.

ಆರೋಪಿ ಚಂದ್ರನ ಕಾಲಿಗೆ ಗುಂಡೇಟು ಬಿದ್ದಿದ್ದು ಕನಕಪುರ ಸರ್ಕಾರಿ ಆಸ್ಪತ್ರಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಚಾಕು ಇರಿತದಿಂದ ಎಸ್‍ಐ ಅನಂತರಾಮ್ ಸಹ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆ ಆರೋಪಿ ಚಂದ್ರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ