ಠಾಣೆಯಲ್ಲಿ ನಿಲ್ಲಿಸಿದ್ದ ಬೈಕ್ ಗೆ ಕನ್ನ !

Kannada News

24-10-2017

ಹಾವೇರಿ: ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ಕಳ್ಳನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರ ಠಾಣೆ ಪೊಲೀಸರು ಬೈಕ್ ಕಳ್ಳತನ ಮಾಡುತ್ತಿದ್ದ ಹೊನ್ನಪ್ಪ ಚವಟಗಿ (32) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಹೊನ್ನಪ್ಪ, ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಮೈದೂರು ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ನಿನ್ನೆ ಮಧ್ಯಾಹ್ನ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಕದ್ದುಕೊಂಡು ಹೋಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೊನ್ನಪ್ಪನ ಮೇಲೆ ಕೆಲವು ತಿಂಗಳುಗಳ ಹಿಂದೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲೂ ಬೈಕ್ ಕಳ್ಳತನ ಕೇಸ್ ದಾಖಲಾಗಿತ್ತು. ಇದೀಗ ಮತ್ತೆ ಬೈಕ್ ಕಳ್ಳತನಕ್ಕೆ ಬಂದಿದ್ದು ಸಿಕ್ಕಿಬಿದ್ದಿದ್ದಾನೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ