ರಾಜ್ಯಾಧ್ಯಕ್ಷರಾಗಿ ನಾಡಗೌಡ ಮರುಆಯ್ಕೆ !

Kannada News

24-10-2017

ಬೆಂಗಳೂರು: ಶರದ್ ಯಾದವ್ ನೇತೃತ್ವದ ಸಂಯುಕ್ತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷರಾಗಿ ಡಾ.ಎಂ.ಪಿ.ನಾಡಗೌಡ ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಲಾಗಿದೆ.

ಪಕ್ಷದ ರಾಷ್ಟ್ರೀಯ ಸಮಿತಿಯನ್ನು ಶರದ್ ಯಾದವ್ ಪುನರ್ ರಚಿಸಿದ್ದು, ಅದರಲ್ಲಿ ಕರ್ನಾಟಕ ಘಟಕದ ಅಧ್ಯಕ್ಷರನ್ನಾಗಿ ಮುಂದಿನ ಮೂರು ವರ್ಷದ ಅವಧಿಗೆ ಅನ್ವಯವಾಗುವಂತೆ ಮರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಜನತಾದಳ ಇಬ್ಬಾಗಗೊಂಡು ಸಂಯುಕ್ತ ಜನತಾದಳ ಹಾಗು ಜಾತ್ಯತೀತ ಜನತಾದಳ ಅಸ್ತಿತ್ವಕ್ಕೆ ಬಂದ ವೇಳೆ ಸಂಯುಕ್ತ ಜನತಾದಳದೊಂದಿಗೆ ಗುರುತಿಸಿಕೊಂಡಿದ್ದ ನಾಡಗೌಡ ಅವರಿಗೆ ಮತ್ತೊಂದು ಅವಧಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ