ವ್ಯಕ್ತಿ ತಲೆ ಮೇಲೆ ಕುಸಿದ ಛಾವಣಿ !

Kannada News

24-10-2017

ಮೈಸೂರು: ನಗರದ ಮಂಡಿಮೊಹಲ್ಲಾದಲ್ಲಿರುವ ಮನೆಯೊಂದರ ಛಾವಣಿ ಕುಸಿದ ಕಾರಣ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಸೊಪ್ಪಿನ ಬೀದಿಯಲ್ಲಿ ಈ ಘಟನೆ ನಡೆದಿದ್ದು, ನಾಗೇಶ್ (45) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಸುರಿದ ನಿರಂತರ ಮಳೆಗೆ ಮನೆ ಶಿಥಿಲಗೊಂಡಿತ್ತು ಎನ್ನಲಾಗಿದೆ. ಇಂದು ಮುಂಜಾನೆ ಅನಿರೀಕ್ಷಿತವಾಗಿ ಮನೆ ಛಾವಣಿ ಕುಸಿದಿದೆ. ಮನೆಯಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ವಾಸು, ಮೇಯರ್ ಎಂ.ಜೆ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪಾಲಿಕೆಯ ಸಿಬ್ಬಂದಿಗಳ ತಂಡ, ಕುಸಿದು ಬಿದ್ದಿರುವ ಕಟ್ಟಡದ ಅವಶೇಷಗಳ ತೆರವು ಕಾರ್ಯಾ ನಡೆಸಿದ್ದಾರೆ.

 

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ