ಆಟೋಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು !

Kannada News

24-10-2017

ಬೆಂಗಳೂರು: ನಗರದ ಹೊಸಗುಡ್ಡದ ಹಳ್ಳಿಯ ಜನತಾ ಕಾಲೋನಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ನಿನ್ನೆ ಮಧ್ಯರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಜನತಾ ಕಾಲೋನಿಯ ಮನೆ ಮುಂಭಾಗ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ರಾತ್ರಿ 3ರ ವೇಳೆ ಬೆಂಕಿ ಹಚ್ಚಿ ಪರಾರಿಯಾಗಿದ್ದು, ಆಟೋ ಹೊತ್ತಿ ಉರಿಯುತ್ತಿದ್ದುದ್ದನ್ನು ನೋಡಿದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬೆಂಕಿಯಿಂದ ಆಟೋ ಸಂಪೂರ್ಣ ಸುಟ್ಟು ಹೋಗಿದ್ದು, ಪ್ರಕರಣ ದಾಖಲಿಸಿರುವ ಜಗಜೀವನರಾಂ ನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಆಟೋ ದುಷ್ಕರ್ಮಿಗಳು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ