‘ಮೋದಿ ಮೊದಲು ರೈತರ ಸಂಕಷ್ಟಕ್ಕೆ ಸ್ಪಂದಿಸಲಿ’

Kannada News

25-10-2017

ಹಾಸನ: ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ, ರೈತರ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಅವರು ಸಾಲದ ಸುಳಿಗೆ ಸಿಲುಕಿದ್ದಾರೆ, ಬೆಳೆದ ಬೆಳೆಗಳು ಒಣಗಿ ನಿಂತಿವೆ, ಈ ಬಗ್ಗೆ ಸರ್ಕಾರ ಗಂಭೀರವಾಗಿ ಗಮನಿಸಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಹಾಸನದಲ್ಲಿಂದು ಮಾತನಾಡಿದ ಅವರು, ಒಣಗಿದ ಜೋಳದ ತುಂಡುಗಳನ್ನು ಸಿಎಂ ಹಾಗೂ ಕೇಂದ್ರ ಸರ್ಕಾರಕ್ಕೂ ತಲುಪಿಸುತ್ತೇನೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೆಳೆ ಹಾನಿಗೆ ಪರಿಹಾರ ಘೋಷಿಸಲಿ. ಪರಸ್ಪರ ದೋಷಾರೋಪಣೆ ಮಾಡದೆ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಆಗ್ರಹಿಸಿದ್ದಾರೆ. ರೈತರ ಪರ ಬೀದಿಗಿಳಿದು ಹೋರಾಟ ಮಾಡಲು ಸಿದ್ದನಿದ್ದೇನೆ, ರೈತರ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ನವಭಾರತ ನಿರ್ಮಿಸಲು ಹೊರಟಿದ್ದಾರೆ. ಅವರೇನಾದ್ರೂ ಮಾಡಲಿ ಮೊದಲು ರೈತರ ಸಂಕಷ್ಟಕ್ಕೆ ಸ್ಪಂದಿಸಲಿ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಹೆಚ್.ಡಿ.ದೇವೇಗೌಡ ನವಭಾರತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ