ಏಪ್ರಿಲ್ ಮೂರನೆ ವಾರದಲ್ಲಿ ಸಿಇಟಿ..?

Kannada News

25-10-2017

ಬೆಂಗಳೂರು: 2018ರ ಏಪ್ರಿಲ್‍ ನಲ್ಲಿ ನಡೆಯಬೇಕಿರುವ ಸಿಇಟಿ ಪರೀಕ್ಷೆಯನ್ನು ಸಾಮಾನ್ಯ ವೇಳಾಪಟ್ಟಿಗಿಂತ ಒಂದು ವಾರ ಮೊದಲೇ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ 2018ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ವೇಳೆ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಉದ್ದೇಶದಿಂದ ಪರೀಕ್ಷೆಗಳನ್ನು ಒಂದು ವಾರ ಮೊದಲೇ ಆಯೋಜಿಸಲು ಕೆಇಎ ನಿರ್ಧರಿಸಿದೆ. ಈಗಾಗಲೇ ಈ ಸಂಬಂಧ ಪ್ರಾಥಮಿಕ ಚರ್ಚೆ ನಡೆಸಲಾಗಿದ್ದು, ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯಗಳು ಸೇರಿದಂತೆ ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇನ್ನು ಸಭೆಯಲ್ಲಿ, ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ನಡೆಸಲು ನಿರ್ಧರಿಸಿದೆ. ಮೇ ತಿಂಗಳ ಮೊದಲ ವಾರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಚುನಾವಣಾ ಆಯೋಗ ಚುನಾವಣೆಯ ಅಧಿಕೃತ ದಿನಾಂಕ ನಿಗದಿ ಮಾಡಿದ ಬಳಿಕ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೂಡ ತನ್ನ ಅಂತಿಮ ವೇಳೆ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಏಪ್ರಿಲ್‍ ಕೆಇಎ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ