ಹೆಬ್ಬಾಳ್ಕರ್ ಗೆ ಹೈಕಮಾಂಡ್ ಅಭಯ..?

Kannada News

25-10-2017

ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು 2018ರ ವಿಧಾನ ಸಭೆ ಚುನಾವಣೆ ಮುಗಿಯುವವರೆಗೂ ಬದಲಾಯಿಸುವುದಿಲ್ಲ ಎಂದು ಹೈಕಮಾಂಡ್ ಅಭಯ ನೀಡಿದೆ ಎಂದು ತಿಳಿದು ಬಂದಿದೆ.

ಚುನಾವಣೆ ಹಿನ್ನೆಲೆ, ಪಕ್ಷದಲ್ಲಿ ತಮ್ಮನ್ನು ಪದಚ್ಯುತಗೊಳಿಸುವ ಪ್ರಯತ್ನ ನಡೆದ ಬೆನ್ನಲ್ಲೇ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಷ್ಮಿತಾ ದೇವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಎರಡು ವರ್ಷದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಹೋರಾಟ ಹಾಗೂ ಪಕ್ಷದಲ್ಲಿ ತಮ್ಮ ವಿರುದ್ಧ ನಡೆದ ಷಡ್ಯಂತ್ರಗಳ ವಿರುದ್ಧವೂ ಹೋರಾಟ ನಡೆಸಿ, ಮಹಿಳಾ ಕಾಂಗ್ರೆಸ್‍ಗೆ ಅಸ್ತಿತ್ವ ತಂದುಕೊಟ್ಟಿರುವುದು, ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿಯೂ ಆರು ವರ್ಷ ಉತ್ತಮ ಕೆಲಸ ಮಾಡಿ, ಬೆಳಗಾವಿಯಲ್ಲಿ 25 ಕೋಟಿ ರೂ.ವೆಚ್ಚದಲ್ಲಿ ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣ ಮಾಡಲು ಶ್ರಮಿಸಿರುವುದಾಗಿ ಹೆಬ್ಬಾಳ್ಕರ್ ವಿವರಣೆ ನೀಡಿದ್ದಾರೆಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ