ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು !

Kannada News

25-10-2017

ಶಹಾಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸಿಂಗನಳ್ಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ (18) ಮೃತ ಯುವತಿ. ಕುರಿ ಮೇಯಿಸಲು ಹೋದಾಗ ಕುರಿಗೆ ವಿದ್ಯುತ್ ತಂತಿ ತಗುಲಿದೆ. ಈ ವಿದ್ಯುತ್ ತಂತಿಯನ್ನು ಬಿಡಿಸಲು ಹೋದ ಯುವತಿಗೂ ಕೂಡ ವಿದ್ಯುತ್ ಸ್ಪರ್ಶಿಸಿದೆ. ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಸಂಬಂಧ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಯಾದಗಿರಿ ಶಹಾಪುರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ