ಪ್ರವಾಸಿ ಮಂದಿರದ ಮೇಲೆ ಡಿಸಿ ದಾಳಿ !

Kannada News

25-10-2017

ಕೋಲಾರ: ಪ್ರವಾಸಿ ಮಂದಿರದ ಮೇಲೆ ಜಿಲ್ಲಾಧಿಕಾರಿ ಜಿ.ಸತ್ಯವತಿ ಅವರು ದಾಳಿ ಮಾಡಿ ಏಳು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರದ ಮಧ್ಯಭಾಗದಲ್ಲಿರುವ ಪ್ರವಾಸಿ ಮಂದಿರದಲ್ಲಿ ಇತ್ತೀಚಿನ ದಿನಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ದೂರುಗಳು ಕೇಳಿ ಬಂದಿತ್ತು.

ಈ ಹಿನ್ನೆಲೆಯಲ್ಲಿ ರಾತ್ರಿ 9 ಗಂಟೆ ಸುಮಾರಿನಲ್ಲಿ ಜಿಲ್ಲಾಧಿಕಾರಿ ಸತ್ಯವತಿ ಪ್ರವಾಸಿ ಮಂದಿರದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮೋಜುಮಸ್ತಿಯಲ್ಲಿ ತೊಡಗಿದ್ದವರು ಅಧಿಕಾರಿಗಳು ಬರುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಐಬಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರು ನಿಲುಗಡೆ ಸ್ಥಳದಲ್ಲಿದ್ದ ಏಳು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡು ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ