ರಾಷ್ಟ್ರಪತಿ ಭಾಷಣಕ್ಕೆ ಕಾಂಗ್ರೆಸ್ ಹರ್ಷ

Kannada News

25-10-2017

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಹಲವು ಮಹನೀಯರನ್ನು ದೇಶಕ್ಕೆ ನೀಡಿದ ಕೀರ್ತಿ ರಾಜ್ಯಕ್ಕೆ ಸಲ್ಲುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಕ್ತ ಕಂಠದಿಂದ ಕರುನಾಡನ್ನು ಶ್ಲಾಘಿಸಿದರು.

ವಿಧಾನಸೌಧದ ವಜ್ರಮಹೋತ್ಸವದ ಅಂಗವಾಗಿ ನಡೆದ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕವನ್ನು ತಮ್ಮ ಭಾಷಣದಲ್ಲಿ ಹಾಡಿ, ಹೊಗಳುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾದರು. ಸುಮಾರು 10 ನಿಮಿಷಗಳ ಭಾಷಣದಲ್ಲಿ ರಾಷ್ಟ್ರಪತಿಯವರು ವಿಜಯನಗರ ಸಾಮ್ರಾಜ್ಯ, ಟಿಪ್ಪುಸ್ತುಲಾನ್, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಸರ್.ಎಂ.ವಿಶ್ವೇಶ್ವರಯ್ಯ ಹಾಗೂ ಮೈಸೂರಿನ ಅರಸರ ಆಡಳಿತವನ್ನು ಸ್ಮರಿಸಿದರು. ಕರ್ನಾಟಕ ವೀರಯೋಧರ ಭೂಮಿಯಾಗಿದೆ. ಟಿಪ್ಪು ಸುಲ್ತಾನ್ ಅಪ್ರತಿಮ ವೀರಯೋಧ. 18ನೇ ಶತಮಾನದಲ್ಲೇ ರಾಕೆಟ್ ಉಡಾವಣೆ ಮಾಡುವ ಮೂಲಕ ತಂತ್ರಜ್ಞಾನಕ್ಕೆ ತನ್ನ ಆದೇ ಕೊಡುಗೆಯನ್ನು ನೀಡಿದ್ದ ಎಂದು ಕೊಂಡಾಡಿದರು.

ಈ ವೇಳೆ ಆಡಳಿತಾರೂಢ ಕಾಂಗ್ರೆಸ್‍ನ ಎಲ್ಲಾ ಸದಸ್ಯರು ಮೇಜು ಕುಟ್ಟಿ ರಾಷ್ಟ್ರಪತಿಗಳ ಭಾಷಣಕ್ಕೆ ಹರ್ಷ ವ್ಯಕ್ತಪಡಿಸಿದರು. ಬೆಂಗಳೂರು ಎಂದಾಕ್ಷಣ ನಮಗೆ ಐಟಿ ನೆನಪಾಗುತ್ತದೆ. ಇತ್ತೀಚೆಗೆ ಈ ನಗರವು ದೇಶದ ಜಿಡಿಪಿ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಇತರೆ ರಾಜ್ಯಗಳಿಗೂ ಬೇರೆ ಬೇರೆ ಕ್ಷೇತ್ರದಲ್ಲಿ ಮಾದರಿಯಾಗಿದೆ ಎಂದು ಕೊಂಡಾಡಿದರು. ಚುನಾವಣೆ ಮುಗಿದ ಬಳಿಕ ಜನಪ್ರತಿನಿಧಿಗಳು ಮತದಾರನಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸುವತ್ತ ಗಮನಹರಿಸಬೇಕೆಂದು ಜನಪ್ರತಿನಿಧಿಗಳಿಗೆ ಕಿವಿಮಾತು ಹೇಳಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ