ಜಿಲ್ಲಾ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ !

Kannada News

25-10-2017

ಬೆಂಗಳೂರು: ಜಮೀನು ವಿಚಾರವಾಗಿ ರಾಜಿ ಮಾಡಲು ಬಂದ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ವಿ. ಜಯರಾಂ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಅವಲಹಳ್ಳಿ ಕಿತ್ತಗನೂರುವಿನಲ್ಲಿ ನಡೆದಿದೆ. ಗಾಯಗೊಂಡಿರುವ ಅವಲಹಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ವಿ. ಜಯರಾಂ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭೂವಿವಾದ ಹಿನ್ನೆಲೆಯಲ್ಲಿದ್ದ ಜಾಗದಲ್ಲಿ ವಾರಸುದಾದರು ಕಾಂಪೌಂಡ್ ನಿರ್ಮಿಸುತ್ತಿದ್ದ ಸ್ಥಳಕ್ಕೆ ಬುಧವಾರ ಬೆಳಿಗ್ಗೆ ಬಂದಿದ್ದರು. ಕಾಂಪೌಂಡ್ ನಿರ್ಮಾಣಕ್ಕೆ ಪೂಜೆ ನಡೆಯುವ ವೇಳೆ ಶೇಖರ್ ಮತ್ತು ಓಲೆಮಂಜ ಮತ್ತವನ ಸಹಚರರು ಏಕಾಏಕಿ ಜಿಲ್ಲಾ ಪಂಚಾಯಿತಿ ಸದಸ್ಯ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಬೆಳಿಗ್ಗೆ ಸುಮಾರು 10.45ರಲ್ಲಿ ಶೇಖರ್ ಮತ್ತು ಕಿತ್ತಗನೂರು ಜಯರಾಂ ಭೂವಿವಾದ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ಶೇಖರನ ಪರವಾಗಿ ಬಂದಿದ್ದ ಓಲೆಮಂಜ ಸಹಚರರು ಮಾರಕಾಸ್ತ್ರ ತಲೆಗೆ ಬಲವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಗೊಳದ ಜಯರಾಂರನ್ನು ಮೊದಲು ರಾಮಮೂರ್ತಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಪ್ರಕರಣ ದಾಖಲಿಸಿರುವ ಅವಲಹಳ್ಳಿ ಪೊಲೀಸರು ಹಲ್ಲೆ ನಡೆಸಿದ ದುಷ್ಕರ್ಮಿಗಳಿಗಾಗಿ ಬಲೆಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಭೂವಿವಾದ ದುಷ್ಕರ್ಮಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ