ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ !

Kannada News

26-10-2017

ದಕ್ಷಿಣ ಕನ್ನಡ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿಯಾದ ಬಳಿಕ ಮೋದಿ ಇದೇ ಮೊದಲ ಬಾರಿಗೆ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅಕ್ಟೋಬರ್28ರ ಶನಿವಾರದಿಂದ ಅಕ್ಟೋಬರ್ 29ರವರೆಗೆ ಸಾರ್ವಜನಿಕರಿಗೆ ಮಂಜುನಾಥನ ದರ್ಶನವನ್ನು ನಿರ್ಬಂಧಿಸಲಾಗಿದೆ.

ಭದ್ರತೆಯ ದೃಷ್ಟಿಯಿಂದ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಭಕ್ತಾದಿಗಳಿಗೆ ಕ್ಷೇತ್ರದ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಆಡಳಿತ ವರ್ಗ ಹೇಳಿದೆ.

ಇತ್ತ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ 29ರಂದು ಬೆಳಿಗ್ಗೆ 11.30ಕ್ಕೆ ಮೋದಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಉಜಿರೆಗೆ ತೆರಳಲಿರುವ ಮೋದಿ, ಎಸ್‍ಡಿಎಂ ಮೈದಾನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ