ಆಸ್ಪತ್ರೆಗೆ ದಾಖಲಾದ ಶ್ರೀಗಳು !

Kannada News

26-10-2017

ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಗಳಿಗೆ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ, ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೆ ಹರ್ನಿಯಾ ಚಿಕಿತ್ಸೆಗೆ ಒಳಗಾಗಿದ್ದ ಶ್ರೀಗಳಿಗೆ ಆರೋಗ್ಯ ತಪಾಸಣೆ ಮಾಡಬೇಕೆಂದು ಮಣಿಪಾಲ ಕೆಎಂಸಿ ವೈದ್ಯರು ಸಲಹೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ  ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ.

ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ, ಭಕ್ತರಿಗೆ ಆತಂಕ ಬೇಡ ಎಂದು ಉಡುಪಿ ಕೃಷ್ಣ ಮಠದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಪರೇಶನ್ ನಂತರ ಕೂಡಾ ಹೊಟ್ಟೆ ನೋವು ಕಾಣಿಸಿಕೊಂಡದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ